- Advertisement -
- Advertisement -


ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಮೃತ ವ್ಯಕ್ತಿ.
ರಾಮನಾಯ್ಕರವರು ಸ್ಕೂಟರ್ ನಲ್ಲಿ ಬಿಸಿರೋಡಿನಿಂದ ಮುಡಿಪು ಕಡೆಗೆ ತನ್ನ ವೈಯಕ್ತಿಕ ಕೆಲಸದ ನಿಮಿತ್ತ ಸಂಚರಿಸುವ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿ ಚಾಲಕ ಇವರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು,ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಳೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ರಾಮ ನಾಯ್ಕ ಅವರು ಕಳೆದ ಅನೇಕ ವರ್ಷಗಳಿಂದ ಬಂಟ್ವಾಳ ಬೈಪಾಸ್ ನಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -