- Advertisement -
- Advertisement -


ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ 9 ಮಂದಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗಳ್ಳಾಪುರದ ಬಳಿ ನಡೆದಿದೆ.
ಲಾರಿಯಲ್ಲಿ ತರಕಾರಿ ದಾಸ್ತಾನಿನ ಜೊತೆಗೆ 25ಕ್ಕೂ ಹೆಚ್ಚು ವ್ಯಾಪಾರಿಗಳು ಪ್ರಯಾಣಿಸುತ್ತಿದ್ದರು. ಇವರೆಲ್ಲಾ ಕುಮಟಾದಲ್ಲಿ ನಡೆಯುವ ವಾರದ ಸಂತೆಗೆ ಹಾವೇರಿ ಜಿಲ್ಲೆಯ ಸವಣೂರಿನಿಂದ ಯಲ್ಲಾಪುರ ಮಾರ್ಗವಾಗಿ ತರಕಾರಿ ಸಾಗಿಸುವ ವೇಳೆ ಈ ದುರ್ಘಟನೆ ನಡೆದಿದೆ. ಮೃತರೆಲ್ಲರೂ ತರಕಾರಿ ವ್ಯಾಪಾರಿಗಳು ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಲಾರಿ ಉರುಳಿದ ಪರಿಣಾಮ 9 ಮಂದಿ ಮೃತಪಟ್ಟಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ ಎಂದು ಯಲ್ಲಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
- Advertisement -