Thursday, May 2, 2024
spot_imgspot_img
spot_imgspot_img

ನೆಲ್ಯಾಡಿ : ಮಾವಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

- Advertisement -G L Acharya panikkar
- Advertisement -

ನೆಲ್ಯಾಡಿ : ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ.

ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48) ಮೃತರು.

ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದು, ಪತ್ನಿ ಹಾಗೂ ಮಕ್ಕಳೊಂದಿಗೆ ಹೊಸಮಜಲು ಎಂಬಲ್ಲಿ ವಾಸವಾಗಿದ್ದರು.
ರಜೆಯಲ್ಲಿ ಊರಿಗೆ ಬಂದಿದ್ದ ಅವರು ಫೆ.18ರಂದು ಸಂಜೆ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ ಕೊಯ್ಯಲೆಂದು ಹತ್ತಿದ್ದವರು ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದು, ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಬಳಿಕ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಗಂಭೀರ ಗಾಯಗೊಂಡ ಹಿನ್ನೆಲೆ ಅವರು ಮೃತಪಟ್ಟಿದ್ದಾರೆ.ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮೃತರ ಪತ್ನಿ ಮೋಹಿನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!