Saturday, June 13, 2026
spot_imgspot_img
spot_imgspot_img

ಮಹಿಳಾ ಹಾಸ್ಟೆಲ್ ಎದುರಲ್ಲೇ ಹಸ್ತಮೈಥುನ ಮಾಡಿ ವಿಕೃತಿ ಮೆರೆಯುತ್ತಿದ್ದ ಕಾಮುಕ; ಸಿಸಿಟಿವಿಯಲ್ಲಿ ದೃಶ್ಯ ಸೆರೆ- ಆರೋಪಿ ಅರೆಸ್ಟ್

- Advertisement -
- Advertisement -

ಮೆಡಿಕಲ್ ಕಾಲೇಜು ಮಹಿಳಾ ಹಾಸ್ಟೆಲ್ ಬಳಿ ನಿತ್ಯ ರಾತ್ರಿ ಸಮಯದಲ್ಲಿ ಆಟೋದಲ್ಲಿ‌ ಬಂದು ಹಾಸ್ಟೆಲ್ ವಿದ್ಯಾರ್ಥಿನಿಯರ ಮುಂದೆ ಅಶ್ಲೀಲ ಪ್ರದರ್ಶನ ಮಾಡಿ ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಬಂಧಿಸಿದ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಬಳಿ ನಡೆದಿದೆ.

ಸಿಜಿಲ್ (27) ಎಂಬ ಆಟೋ ಚಾಲಕ ಬಂಧಿತ ಅರೋಪಿಯಾಗಿದ್ದಾನೆ. ಸಿಜಿಲ್ ಎಂಬಾತ ಕಳೆದ ಒಂದು ವಾರದಿಂದ ರಾತ್ರಿ ಸಮಯದಲ್ಲಿ ಮದ್ಯಪಾನ ಮಾಡಿಕೊಂಡು ಲೇಡಿಸ್ ಹಾಸ್ಟೆಲ್ ಬಳಿ ಹೋಗಿ ಹಸ್ತಮೈಥುನ ಮಾಡಿಕೊಳ್ಳುವುದು ಕಂಡುಬಂದಿದೆ. ಈತನ ವರ್ತನೆಗಳು ಸಿಸಿಟಿವಿಯಲ್ಲೂ ಸೆರೆಯಾಗಿದೆ. ಸಿಸಿಟಿವಿಯ ಚಹರೆಗಳ ಆಧರಿಸಿ ಅರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಕೊಡಗು ಎಸ್‌ಪಿ ರಾಮರಾಜನ್ ತಿಳಿಸಿದ್ದಾರೆ.

ಆರೋಪಿ ಬೆಳಗ್ಗೆ ತೋಟದ ಕೆಲಸಕ್ಕೆ ಹೋಗಿ ರಾತ್ರಿ ಸಮಯದಲ್ಲಿ ಮಡಿಕೇರಿಯಲ್ಲಿ ಖಾಸಗಿ ಆಟೋವನ್ನು ಬಾಡಿಗೆಗೆ ತೆಗೆದುಕೊಂಡು, ಆಟೋ ಓಡಿಸುವ ನೆಪದಲ್ಲಿ ಈ ರೀತಿಯ ಕೃತ್ಯ ಎಸಗಿದ್ದಾನೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಕಳೆದ ರಾತ್ರಿಯೇ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್‌ಪಿ ಹೇಳಿದ್ದಾರೆ.

Insta: glacharyajewellers
Fb: glacharya
- Advertisement -

Related news

error: Content is protected !!