ತನ್ನಎಲೆಕ್ಟ್ರಿಕ್ ಸ್ಕೂಟರ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಕಿರಾತಕನೋರ್ವ ಓಲಾ ಶೋ ರೂಂ ಗೆ ಬೆಂಕಿ ಹಚ್ಚದ ಘಟನೆ ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಸಂಭವಿಸಿದೆ.
ಮಹಮ್ಮದ್ ನದೀಮ್ ಎಂಬ ವ್ಯಕ್ತಿ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಸಿಬ್ಬಂದಿ ಜೊತೆ ವಾಗ್ವಾದ ಮಾಡಿ ಬಳಿಕ ಪೆಟ್ರೋಲ್ ತಂದು ಶೋ ರೂಂ ಒಳಗೆ ಬೆಂಕಿ ಹಚ್ಚಿದ್ದು ಬಯಲಾಗಿದೆ.
ಓಲಾ ಎಲೆಕ್ಟ್ರಿಕ್ ವಾಹನಗಳ ಶೋ ರೂಂಗೆ ಕಿರಾತಕ ಹಚ್ಚಿದ್ದ ಬೆಂಕಿಗೆ ಸುಟ್ಟು ಕರಕಲಾಗಿದೆ. ಪೊಲೀಸರ ತನಿಖೆ ವೇಳೆ ಬೆಂಕಿ ಹಚ್ಚಿದ್ದು ಬಯಲಾಗಿದೆ. ಸದ್ಯ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯಲ್ಲಿ 6 ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳು ಸುಟ್ಟು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಕೇವಲ 20 ದಿನದ ಹಿಂದೆ ಓಲಾ ಕಂಪನಿಯ ಸ್ಕೂಟರ್ ಖರೀದಿಸಿದ್ದ ಆರೋಪಿಯ ಸ್ಕೂಟರ್ ಪದೇ ಪದೇ ರಿಪೇರಿಗೆ ಬರುತ್ತಿದೆ ಎಂದು ಸಿಟ್ಟಾಗಿದ್ದ. ಸಾಕಷ್ಟು ಬಾರಿ ಶೋರೂಂಗೆ ಬಂದು ಸರಿಪಡಿಸಿಕೊಡುವಂತೆ ಮನವಿ ಮಾಡಿದ್ದ. ಆದ್ರೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದು ಇದರಿಂದ ಬೇಸತ್ತು ನಿನ್ನೆ ಶೋ ರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ತಿಳಿದುಬಂದಿದೆ.