Monday, June 22, 2026
spot_imgspot_img
spot_imgspot_img

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ..!

- Advertisement -
- Advertisement -

ಕಲಬುರಗಿ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಪಟವಾದ ತಾಂಡಾದಲ್ಲಿ ನಡೆದಿದೆ.

ಬಂಧಿತ ವ್ಯಕ್ತಿಯನ್ನು ಕಿಶನ್ ಚೌವ್ಹಾಣ್ ಎಂದು ಗುರುತಿಸಲಾಗಿದೆ.

ಈತ ತಮ್ಮದೇ ಜಮೀನಿನಲ್ಲಿ ತೊಗರಿ ಬೆಳೆ ಮಧ್ಯೆ ಗಾಂಜಾ ಬೆಳೆದಿದ್ದ. ಪೊಲೀಸರ ದಾಳಿ ವೇಳೆ 1.4 ಲಕ್ಷ ರೂ. ಮೌಲ್ಯದ 2.15 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಈ ಘಟನೆಯ ಬಗ್ಗೆ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!