Tuesday, June 9, 2026
spot_imgspot_img
spot_imgspot_img

ಬೆಳ್ತಂಗಡಿ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಮೃತ್ಯು

- Advertisement -
- Advertisement -

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಮೃತರನ್ನು ಮಾಜಿ ವಿಜಯ ಬ್ಯಾಂಕ್ ಉದ್ಯೋಗಿ, ಮುಗ್ಗ ಗುತ್ತು ಮನೆತನದ ಟ್ರಸ್ಟ್ ಕೋಶಾಧಿಕಾರಿ, ರಾಘವೇಂದ್ರ ಮಠದ ಕೋಶಾಧಿಕಾರಿ, ಗುರುನಾರಾಯಣ ಸಂಘದ ಮಾಜಿ ಉಪಾಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಮಾವ ಶೇಖರ್ ಬಂಗೇರ ಹೇರಾಜೆ(65) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಮಾ.29 ರಂದು ರಾತ್ರಿ ಶೇಖರ್ ಬಂಗೇರರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಸಾವನ್ನಪ್ಪಿದ್ದಾರೆ.

ಸ್ಕೂಟರ್ ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ (19) ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!