Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು

- Advertisement -
- Advertisement -

ಬಂಟ್ವಾಳ: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬಿ.ಸಿ.ರೋಡಿನ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.

ಮೃತರನ್ನು ದಾಸಕೋಡಿ ನಿವಾಸಿ ಲೂಯಿಸ್ ಡಿ’ಸೋಜಾ (64) ಎಂದು ಗುರುತಿಸಲಾಗಿದೆ.

ಲೂಯಿಸ್ ರವರು ಕಾಲು ನೋವಿನಿಂದ ಬಳಲುತ್ತಿದ್ದು, ವೈದ್ಯರ ಬಳಿಗೆ ಆಗಮಿಸಿದ್ದರು. ಔಷಧ ಪಡೆದು ಮನೆಗೆ ತೆರಳುವುದಕ್ಕಾಗಿ ಬಸ್ಸಿಗೆ ಕಾಯುತ್ತಿದ್ದ ಸಂದರ್ಭ ಏಕಾಏಕಿ ಕುಸಿದು ಬಿದ್ದರು. ಸಾರ್ವಜನಿಕರು ಅವರನ್ನು ಉಪಚರಿಸಿದ್ದು, ಬಳಿಕ ಆ್ಯಂಬುಲೆನ್ಸ್ ಮೂಲಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

- Advertisement -

Related news

error: Content is protected !!