Sunday, June 14, 2026
spot_imgspot_img
spot_imgspot_img

ಬಂಟ್ವಾಳ: ಸ್ನೇಹಿತರ ಜೊತೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು

- Advertisement -
- Advertisement -

ಬಂಟ್ವಾಳ: ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ನೀರುಪಾಲಾದ ಘಟನೆ ನಿನ್ನೆ ಸಂಜೆ ನಡೆದಿದೆ.

ಸುರತ್ಕಲ್ ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ನಿನ್ನೆ ಸಂಜೆ ಗಾಳ ಹಾಕಿ ಮೀನು ಹಿಡಿಯಲು ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಬಂದಿದ್ದರು.

ಮೀನು ಹಿಡಿಯುತ್ತಿರುವ ವೇಳೆ ಮೈಕಲ್ (53) ಎಂಬವರು ಆಯ ತಪ್ಪಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಭಾರೀ ಮಳೆಯಿಂದ ನದಿ ಉಕ್ಕಿ ಹರಿಯುತಿದ್ದು ದೋಣಿಯ ಮೂಲಕ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ ನಂತರ ಬಂಟ್ವಾಳ ಅಗ್ನಿಶಾಮಕ ದಳದವರು ಆಗಮಿಸಿ ಹುಡುಕಾಟ ನಡೆಸಿದರೂ ನೀರಿನ‌ ಹರಿವು ಹೆಚ್ಚಾಗಿದ್ದರಿಂದ ಹಾಗೂ ರಾತ್ರಿಯಾದ ಕಾರಣ ಕಾರ್ಯಾಚರಣೆಗೆ ತೊಂದರೆಯಾಗಿದ್ದು ಿಂದುಮತ್ತೆ ಹುಡುಕಾಟ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಉಪ್ಪಿನಂಗಡಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಉಪಸ್ಥಿತರಿದ್ದರು.

- Advertisement -

Related news

error: Content is protected !!