Monday, June 15, 2026
spot_imgspot_img
spot_imgspot_img

ಅನುಮಾನಾಸ್ಪದವಾಗಿ ವಿವಾಹಿತ ಮಹಿಳೆ ಸಾವು..!

- Advertisement -
- Advertisement -

ಮೂಡಿಗೆರೆ: ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಸುಬೀಕ್ಷಾ (26) ಎಂದು ಗುರುತಿಸಲಾಗಿದೆ.

ಸುಬೀಕ್ಷಾ ತನ್ನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಸಾವಿನ ಬಗ್ಗೆ ಆಕೆಯ ತವರು ಮನೆಯವರು ಅನುಮಾನ ವ್ಯಕ್ತಪಡಿಸಿ ಬಾಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ.

ಮೃತ ಸುಭೀಕ್ಷಾ ತಂದೆ ಚಿನ್ನೇಗೌಡ ತನ್ನ ಮಗಳಿಗೆ ಪತಿ, ಮಾವ ಮತ್ತು ಅತ್ತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು, ತನ್ನ ಮಗಳ ಸಾವಿನ ಬಗ್ಗೆ ಅನುಮಾನವಿದ್ದು ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಬಾಳೂರು ಪೊಲೀಸರು ಮೃತ ಸುಭೀಕ್ಷಾ ಪತಿ ಎಂ.ಸಿ.ಪ್ರವೀಣ, ಮಾವ ಚಂದ್ರೇಗೌಡ ಅತ್ತೆ ಲಕ್ಷ್ಮೀ ವಿರುದ್ಧ ಪ್ರಕರಣ ದಾಖಲಿಸಿ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!