

ಮಂಚಿ : ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ, ಮಂಚಿ ಶಕ್ತಿ ಕೇಂದ್ರದ ವತಿಯಿಂದ “ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ” ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆ ಇಂದು ಗುರುವಾರ (ನ.12ರಂದು) ನಡೆಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲನ “ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ” ಬೃಹತ್ ಪಾದಯಾತ್ರೆ ಮಂಚಿ ಗ್ರಾಮ ಪಂಚಾಯತ್ ಎದುರುಗಡೆ ನಡೆಸಲಾಯಿತು.
ನಂತರ ಪಂಚಾಯತ್ ಎದುರುಗಡೆ ನಡೆದ ಪ್ರತಿಭಟನಾ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಪ್ರಧಾನ ಭಾಷಣ ಜಿಲ್ಲಾ ಪ್ರಮುಖರಾದ ರಾಮದಾಸ್ ಬಂಟ್ವಾಳ ಮಾಡಿದರು. ಪ್ರಾಸ್ತಾವಿಕವಾಗಿ ಶಿವಪ್ರಸಾದ್ ಶೆಟ್ಟಿ ಮಾತನಾಡಿದರು.
ಸಭೆಯಲ್ಲಿ ಮಂಡಲ ಕಾರ್ಯದರ್ಶಿ ವಿಜಯ ನಾಯಕ್, ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಕೇಶವ ರಾವ್ , ಪ್ರಧಾನ ಕಾರ್ಯದರ್ಶಿ ಶಶಿಧರ್ ರೈ ಕುಳಾಲು, ಮಂಚಿ ಶಕ್ತಿ ಕೇಂದ್ರದ ಅಧ್ಯಕ್ಷ ಮೋಹನದಾಸ್ ಶೆಟ್ಟಿ ಪುದ್ದೊಟ್ಟು, ಪಭಾರಿ ಹರಿಪ್ರಸಾದ್ ಭಂಡಾರಿಬೆಟ್ಟು, ಮಂಡಲ ಒಬಿಸಿ ಮೋರ್ಚಾ ದ ಜಯಕಿಶೋರ್,ಕೊಲ್ನಾಡು ಮಹಾಶಕ್ತಿ ಕೇಂದ್ರದ ಯುವ ಮೋರ್ಚಾ ಅಧ್ಯಕ್ಷ ರಾಜೇಶ್ ಕುಕ್ಕಾಜೆ, ಮಾಜಿ ಪಂಚಾಯತ್ ಅಧ್ಯಕ್ಷರಾದ ಪುಷ್ಪ ಕಾಮತ್, ಪ್ರಮೀಳಾ ಕಿಶೋರ್, ಪಂಚಾಯತ್ ಸದಸ್ಯರು, ಸಹಕಾರಿ ಸಂಘದ ನಿರ್ದೇಶಕರು, ಬೂತ್ ಅಧ್ಯಕ್ಷರು, ಪದಾಧಿಕಾರಿಗಳು, ಪಂಚಾಯತ್ ಸದಸ್ಯರು, ಕಾರ್ಯಕರ್ತರು ಭಾಗವಹಿಸಿದರು.
ಕಾರ್ಯಕ್ರಮದ ಸ್ವಾಗತ ಹಾಗೂ ವಂದನೆಯನ್ನು ರಮೇಶ್ ರಾವ್ ನೆರವೇರಿಸಿದರು.








