Monday, May 6, 2024
spot_imgspot_img
spot_imgspot_img

ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ..!!

- Advertisement -G L Acharya panikkar
- Advertisement -

ಧಾರವಾಡದ ಮುಸ್ಲಿಂ ಕುಟುಂಬವೊಂದು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

ಕಾರ್ಪೆಂಟರ್ ಕೆಲಸ ಮಾಡುವ ಕುಟುಂಬವೊಂದು ಧಾರವಾಡದ ಜ್ಯೋತಿಷಿ ಒಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನ ಇಲ್ಲಿಯ ಪಿತೃಶಾಲೆಯಲ್ಲಿ ನಡೆಸಿದ್ದಾರೆ.

ನಾವು ಮೊದಲಿನಿಂದಲೂ ಕುಂಡಲಿ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಮೊರೆ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳಿಗೆ ಸಿಗಲಿ ಎಂಬ ಉದ್ಧೇಶದಿಂದ ಈ ಕಾರ್ಯ ಮಾಡಿದ್ದೇವೆ ಎಂದು ಪಿತೃಕಾರ್ಯದಲ್ಲಿ ಭಾಗಿಯಾದ ಧಾರವಾಡದ ಧಾನೇಶ್ವರಿ ನಗರದ ಶಂಸಾದ್ ತಿಳಿಸಿದರು.

ಮುಸ್ಲಿಂ ಕುಟುಂಬ ಜ್ಯೋತಿಷಿಯ ಸಲಹೆಯಂತೆ ಗೋಕರ್ಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ವೇ.ನಾಗರಾಜ ಭಟ್ ಹಾಗೂ ವೇ.ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಗೋಕರ್ಣದಲ್ಲಿ ಕ್ರೈಸ್ತ ಸಮುದಾಯದವರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿವೆ. ಆದರೆ ಮುಸ್ಲಿಂ ಕುಟುಂಬ ಇದೇ ಮೊದಲ ಬಾರಿಗೆ ಬಾರಿಗೆ ಪಿತೃಕಾರ್ಯ ನೆರವೇರಿಸಿದೆ ಎಂಬ ಮಾತುಗಳು ಕೇಳಿಬಂದಿವೆ.

- Advertisement -

Related news

error: Content is protected !!