Saturday, June 28, 2025
spot_imgspot_img
spot_imgspot_img

ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಜಾಲ ಪತ್ತೆ; 10 ಮಂದಿ ಅರೆಸ್ಟ್‌..!

- Advertisement -
- Advertisement -
vtv vitla

ಬಾಲಮಂದಿರದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದ ಆರೋಪದ ಮೇಲೆ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕಿಯೊಡನೆ ಶಿವಮೊಗ್ಗದಲ್ಲಿ ಸುತ್ತಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಬಾಲಕಿಯನ್ನು ಬಾಲಮಂದಿರಕ್ಕೆ ಕಳುಹಿಸಿಕೊಡಲಾಗಿತ್ತು. ಇಲ್ಲಿಂದ ತಪ್ಪಿಸಿಕೊಂಡಿದ್ದ ಬಾಲಕಿ ತನ್ನೊಡನೆ ಮತ್ತೊಬ್ಬ ಗೆಳತಿಯನ್ನೂ ಕರೆದೊಯ್ದಿದ್ದಳು. ಬಳಿಕ ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದಾರೆ. ಈ ಇಬ್ಬರು ಬಾಲಕಿಯರ ಮೇಲೆ ಹಲವರು ಅತ್ಯಾಚಾರವೆಸಗಿದ್ದರು.

ಪ್ರಕರಣದಲ್ಲಿ ಆರೋಪಿಗಳಾಗಿರುವ ಇನ್ನೂ ಇಬ್ಬರು ವ್ಯಕ್ತಿಗಳು ಪರಾರಿಯಾಗಿದ್ದಾರೆ. ನಿರ್ಲಕ್ಷ್ಯದ ಆರೋಪದ ಮೇಲೆ ಬಾಲ ಮಂದಿರದ ಅಧಿಕಾರಿಗಳ ವಿರುದ್ಧವೂ ನೋಟಿಸ್‌ ಜಾರಿಗೊಳಿಸಲಾಗಿದೆ.

- Advertisement -

Related news

error: Content is protected !!