Saturday, June 28, 2025
spot_imgspot_img
spot_imgspot_img

ವಿಟ್ಲ: ವ್ಯಕ್ತಿಯೋರ್ವರು ತಾಯಿ- ಮಗನಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವಬೆದರಿಕೆ

- Advertisement -
- Advertisement -

ವಿಟ್ಲ: ವ್ಯಕ್ತಿಯೋರ್ವರು ತಾಯಿ- ಮಗನಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆಯು ದಿನಾಂಕ: 28-02-2024 ರಂದು ಸಂಜೆ, ಆರೋಪಿಯಾದ ಲವೀನ್ ಜೋಗಿ ಎಂಬಾತನು, ಮಹಿಳೆಯ ಜಮೀನಿಗೆ ಹೋಗುವ ದಾರಿಗೆ ಬೇಲಿ ಹಾಕುತ್ತಿದ್ದನ್ನು ನೋಡಿ, ಸ್ಥಳಕ್ಕೆ ತೆರಳಿ ಈ ಬಗ್ಗೆ ವಿಚಾರಿಸಿದಾಗ, ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು, ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯ ವೇಳೆ ಮಹಿಳೆಯ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಮಗನಿಗೂ ಆರೋಪಿಯು ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ್ದಾನೆ.
ಹಲ್ಲೆಯಿಂದ ಗಾಯಗೊಂಡ ಸಂತ್ರಸ್ತ ಮಹಿಳೆ ಹಾಗೂ ಅವರ‌ ಮಗ ವಿಟ್ಲ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಘಟನೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 52/2024 ಕಲಂ: 504,354,323,324,506 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!