Wednesday, May 15, 2024
spot_imgspot_img
spot_imgspot_img

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ನಡು ರಸ್ತೆಯಲ್ಲೇ ಉರಿದು ಭಸ್ಮ

- Advertisement -G L Acharya panikkar
- Advertisement -

ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಂಗಳೂರಿಂದ ಪ್ರಯಾಣಿಕರನ್ನ ಹೊತ್ತು ವಿಜಯಪುರಕ್ಕೆ ಬರುತ್ತಿದ್ದಾಗ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ. ಚಕ್ರ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸ್ಫೋಟಗೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ಸಿನಿಂದ ಕೆಳಗಡೆ ಇಳಿದ ಪರಿಣಾಮ ಯಾವುದೇ ಸಾವು ನೋವು ಸಂಭವಿಸಿಲ್ಲ. ಪ್ರಯಾಣಿಕರ ಬೆಲೆಬಾಳುವ ವಸ್ತುಗಳು, ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ಗಾಬರಿಗೊಂಡ ಪ್ರಯಾಣಿಕರು ಬೇರೆ ವಾಹನಗಳ ಸಹಾಯದಿಂದ ಊರು ಸೇರಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಮತ್ತು ಅಗ್ನಿ ಶಾಮಕ‌ ದಳ ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!