Wednesday, May 15, 2024
spot_imgspot_img
spot_imgspot_img

ಬೈಕ್‌ಗೆ ಖಾಸಗಿ ಬಸ್‌ ಡಿಕ್ಕಿ; ತಂದೆಯ ಎದುರೇ ಪ್ರಾಣಬಿಟ್ಟ ಮಗಳು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -

ಬೈಕ್‌ಗೆ ಖಾಸಗಿ ಬಸ್‌ ಡಿಕ್ಕಿಯಾಗಿ ಪಿಯು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್‌ನಲ್ಲಿ ನಡೆದಿದೆ. ದಿಶಾ (18) ಮೃತ ದುರ್ದೈವಿ.

ದಿಶಾ ತನ್ನ ತಂದೆ ಸತೀಶ್‌ ಜತೆಗೆ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದಳು. ಈ ವೇಳೆ ಹಿಂದಿನಿಂದ ಬಂದ ಖಾಸಗಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ದಿಶಾ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾಳೆ. ಕೂದಳೆಅಂತರದಲ್ಲಿ ತಂದೆ ಸತೀಶ್‌ ಬಚಾವ್ ಆಗಿದ್ದಾರೆ.

ದಿಶಾ ಮಲ್ಲೇಶ್ವರಂನ ಎಂಇಎಸ್‌ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ತಂದೆ ಕಣ್ಣೆದುರೇ ಮಗಳ ಪ್ರಾಣ ಹಾರಿ ಹೋಗಿದ್ದು, ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ. ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

- Advertisement -

Related news

error: Content is protected !!