- Advertisement -
- Advertisement -
ಮಂಗಳೂರು : ಖಾಸಗಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿರುವ ಘಟನೆ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಮಂಗಳವಾರ ಸಂಜೆ ನಡೆದಿದೆ.
ಆದಿ ಲಕ್ಷ್ಮಿ ಕಂಪನಿಗೆ ಸೇರಿರುವ ನವದುರ್ಗಾ ಎಂಬ ಹೆಸರಿನ ಬಸ್ ಬ್ರೇಕ್ ಫೇಲ್ ಆದ ಕಾರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಉರುಳಿದೆ. ಪರಿಣಾಮ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಾಗಳಾಗಿದ್ದು, ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿಯ ಸುಮಾರು 100 ಮೀ ಸಾಗುವಾಗಲೇ ಈ ಅವಘಡ ಸಂಭವಿಸಿದೆ. ಬಸ್ಸು ಕೈಕಂಬದಿಂದ ಬಿ ಸಿ ರೋಡ್ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
- Advertisement -