Friday, June 27, 2025
spot_imgspot_img
spot_imgspot_img

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ..!

- Advertisement -
- Advertisement -

ಮದ್ಯಪಾನ ಮಾಡುವ ವೇಳೆ ಜಗಳ ನಡೆದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಹಾಸನದ ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳ ಹೋಬಳಿ ಅರುವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ರಾಮಚಂದ್ರ ಸಂಜೀವಪ್ಪನವರ (42) ಕೊಲೆಗೈದ ಆರೋಪಿ ರುದ್ರಯ್ಯ ಕೊಂಗವಾಡ ಎಂದು ಗುರುತಿಸಲಾಗಿದೆ.

ಇಬ್ಬರು ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದ ಕಳ್ಳಿಪೇಟೆ ಓಣಿಯ ನಿವಾಸಿಗಳು. ಎರಡು ವಾರಗಳ ಹಿಂದೆ ಇಟ್ಟಿಗೆ ಕಾರ್ಖಾನೆಯಲ್ಲಿ ಕೂಲಿ ಕೆಲಸಕ್ಕೆ ರುದ್ರಯ್ಯ ಹಾಗೂ ರಾಮಚಂದ್ರ ಬಂದಿದ್ದರು. ಅರುವನಹಳ್ಳಿ ಗ್ರಾಮದ ಕೆಪಿಐ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು.

ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ ಏರಿ ರುದ್ರಯ್ಯ ತನ್ನ ಸ್ನೇಹಿತ ರಾಮಚಂದ್ರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ರಾಮಚಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!