Tuesday, June 23, 2026
spot_imgspot_img
spot_imgspot_img

ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗ ಮೂಲದ ಮೂವರು ನೀರು ಪಾಲು

- Advertisement -
- Advertisement -

ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ತೆರಳಿದ್ದ ಮೂವರು ಯುವಕರು ನೀರು ಪಾಲಾಗಿ ನಾಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ಮೂಲದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ನೀರು ಪಾಲಾದ ದುರ್ದೈವಿಗಳು. ಮೂವರು ಪ್ರವಾಸಿಗರು ಭದ್ರಾ ನದಿಯ ಬ್ಯಾಕ್ ವಾಟರ್‌ನಲ್ಲಿ ತೆಪ್ಪದಲ್ಲಿ ಹೋಗಿದ್ದರು. ಈ ವೇಳೆ ತೆಪ್ಪ ಮುಳುಗಿ ಘಟನೆ ಸಂಭವಿಸಿದೆ. ಇದೀಗ ಎನ್.ಆರ್ ಪುರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

- Advertisement -

Related news

error: Content is protected !!