Friday, June 19, 2026
spot_imgspot_img
spot_imgspot_img

ಮಂಗಳೂರು: ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ

- Advertisement -
- Advertisement -

ಮಂಗಳೂರು : ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ.
ಬೊಂದೆಲ್ ಪಚ್ಚನಾಡಿಯ ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ವಾದಿರಾಜ್ ಅವರಿಗೆ ಪತ್ನಿ, ಹಾಗೂ ಇಬ್ಬರು ಮಕ್ಕಳಿದ್ದು, ಬೆಳಿಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದು ,ಪತ್ನಿ ಕೂಡಾ ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಾಗಿದೆ. ಆತ್ಮಹತ್ಯೆಗೆ ನಿಖರ ಕಾಣ ತಿಳಿದುಬಂದಿಲ್ಲ.

- Advertisement -

Related news

error: Content is protected !!