Monday, May 6, 2024
spot_imgspot_img
spot_imgspot_img

ವಾರಾಂತ್ಯ ಕುಕ್ಕೆ ಸುಬ್ರಹ್ಮಣ್ಯ ಪ್ರವಾಸ ಹೋಗುವ ಭಕ್ತರ ಗಮನಕ್ಕೆ ವಿಶೇಷ ಸೂಚನೆ

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ; ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಮಣ್ಯ. ಪ್ರತಿನಿತ್ಯ ನೂರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಾರಾಂತ್ಯ, ಸರ್ಕಾರಿ ರಜೆ ದಿನಗಳಲ್ಲಿ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ವಾರಾಂತ್ಯದಲ್ಲಿ ಕುಕ್ಕೆ ಸುಬ್ರಮಣ್ಯ ಪ್ರವಾಸ ಕೈಗೊಳ್ಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದಿದೆ. ದೇವಾಲಯಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.

ಶ್ರೀ ದೇವಳದಲ್ಲಿ 2023-24ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ದಿನಾಂಕ 09/12/2023ರ ಶನಿವಾರ “ಮೂಲಮೃತಿಕಾ” ಪ್ರಸಾದ ತೆಗೆಯುವ ಕಾರ್ಯಕ್ರಮ ಇರುತ್ತದೆ. ಆದ್ದರಿಂದ ಭಕ್ತಾದಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೂಲಮೃತಿಕಾ ಪ್ರಸಾದವನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ. ಈ ಪ್ರಸಾದವು ರೋಗ ನಿರೋಧಕ ಶಕ್ತಿ ಹೊಂದಿದೆ ಎಂಬುದು ಭಕ್ತರ ನಂಬಿಕೆಯಾಗಿದೆ. ಚರ್ಮರೋಗಗಳ ಪರಿಹಾರಕ್ಕೆ ಇದು ಉತ್ತಮ ಔಷಧಿ.

ಸಾವಿರಾರು ಭಕ್ತರು ಮೂಲಮೃತಿಕಾ ಪ್ರಸಾದವನ್ನು ತೆಗೆದುಕೊಂಡು ಹೋಗಲು ಸುಬ್ರಮಣ್ಯ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಶುಭ ಕಾರ್ಯಗಳ ಸಂದರ್ಭದಲ್ಲಿ, ರೋಗಗಳ ನಿವಾರಣೆಗೆ ಸಹ ಈ ಪ್ರಸಾದವನ್ನು ಬಳಕೆ ಮಾಡುತ್ತಾರೆ. ನಾಗಾರಾಧನೆಯ ಪುಣ್ಯ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯಕ್ಕೆ ಆಶ್ಲೇಷ ಬಲಿ ಸೇರಿದಂತೆ ವಿವಿಧ ಸೇವೆಗಳನ್ನು ಮಾಡಿಸಲು, ದೇವರ ದರ್ಶನ ಪಡೆಯಲು ಪ್ರತಿನಿತ್ಯ ನೂರಾರು ಜನರು ಆಗಮಿಸುತ್ತಾರೆ. ವಾರಾಂತ್ಯದಲ್ಲಿ ಆಗಮುವು ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಕರ್ನಾಟಕದ ಸರ್ಕಾರದ ‘ಶಕ್ತಿ’ ಯೋಜನೆ ಜಾರಿಯಾದ ಬಳಿಕ ಕುಕ್ಕೆ ದೇವಾಲಯಕ್ಕೆ ಆಗಮಿಸುವ ಮಹಿಳಾ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ವಾರಾಂತ್ಯದಲ್ಲಿ ಹೆಚ್ಚಿನ ಭಕ್ತರು ಆಗಮಿಸುವುದರಿಂದ ಅರ್ಧ ದಿನಗಳ ಕಾಲ ದೇವಾಲಯದಲ್ಲಿ ಸೇವೆಗಳು ಲಭ್ಯವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

- Advertisement -

Related news

error: Content is protected !!