Tuesday, May 21, 2024
spot_imgspot_img
spot_imgspot_img

ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ; ಬೈಕ್ ಸವಾರ ಸಾವು..!

- Advertisement -G L Acharya panikkar
- Advertisement -

ಬಳ್ಳಾರಿ: ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ ವಿನಾಯಕ ನಗರ ಬಳಿ ನಡೆದಿದೆ.

ಮೃತಪಟ್ಟ ಬೈಕ್ ಸವಾರನನ್ನು ಕಂಪ್ಲಿ ತಾಲೂಕಿನ ಮುದ್ದಾಪುರ ಗ್ರಾಮದ ನಿವಾಸಿ ​​ಹೊನ್ನೂರಪ್ಪ(37) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಬೈಕ್ ಸವಾರ ಹೊನ್ನೂರಪ್ಪ ಲಾರಿ ಹರಿದು ಅಪ್ಪಚಿಯಾಗಿದ್ದಾನೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!