Saturday, June 28, 2025
spot_imgspot_img
spot_imgspot_img

ಪೋಷಕರ ಬುದ್ಧಿವಾದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ..!

- Advertisement -
- Advertisement -

ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಹಬ್ಬಕ್ಕೆ ಮನೆಗೆ ತೆರಳಿದ್ದಾಗ ಪೋಷಕರು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಬಿ.ಎ ವ್ಯಾಸಂಗ ಮಾಡುತಿದ್ದ, ಅವರು ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದರು.

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಮನೆಯಲ್ಲಿ ವಿಷ ಸೇವಿಸಿದ್ದಾಳೆ. ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

- Advertisement -

Related news

error: Content is protected !!