- Advertisement -
- Advertisement -
ವಿಜಯಪುರ: ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ಬಿದ್ದು ವಿದ್ಯಾರ್ಥಿಯೊರ್ವ ಹಿಂಬದಿ ಚಕ್ರಕ್ಕೆ ಸಿಲುಕಿದ ಪರಿಣಾಮ ಸಾವನ್ನಪ್ಪಿದ ಘಟನೆ ಸಿಂಧಗಿ ತಾಲೂಕಿನ ಬನ್ನಿಹಟ್ಟಿ ಪಿ.ಎ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಸಂದೀಪ ಶಿವಪ್ಪ ಗಿಡ್ಡನಗೋಳ (16) ಎಂದು ಗುರುತಿಸಲಾಗಿದೆ.
ಬಸ್‌ನಿಂದ ಬಿದ್ದ ವಿದ್ಯಾರ್ಥಿಯು ಹಿಂಬದಿ ಚಕ್ರಕ್ಕೆ ಸಿಲುಕಿದ್ದಾನೆ. ಬಾಲಕನ್ನು ಉಳಿಸಲು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಬಾಲಕ ಪಟ್ಟಣದ ಹೆಚ್.ಜಿ ಹೈಸ್ಕೂಲ್ನಲ್ಲಿ 10ನೇ ತರಗತಿ ಓದುತ್ತಿದ್ದ. ಚಲಿಸುತ್ತಿದ್ದ ಬಸ್‌ನಿಂದ ಜಿಗಿಯುವಾಗ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ. ಘಟನೆಗೆ ಬಸ್ ಚಾಲಕ ಹಾಗೂ ನಿರ್ವಾಹಕನ ನಿರ್ಲಕ್ಷ್ಯವೇ ಕಾರಣವೆಂದು ಗ್ರಾಮಸ್ಥರು ಅರೋಪಿಸಿದ್ದಾರೆ.
- Advertisement -