Sunday, June 14, 2026
spot_imgspot_img
spot_imgspot_img

ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು

- Advertisement -
- Advertisement -

ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ದಾರುಣ ಘಟನೆ ಹುಬ್ಬಳ್ಳಿಯ ಕಿರೇಸೂರ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ (9) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ನಾಗವಿ ಗಾಯಗೊಂಡ ವಿದ್ಯಾರ್ಥಿಯಾಗಿದ್ದು ಈತನನ್ನು ಕಿಮ್ಸ್ ಗೆ ದಾಖಲಿಸಲಾಗಿದೆ.

ಬೆಳಗ್ಗೆ ಶಾಲೆಗೆ ಬಂದ ಮಕ್ಕಳು ನಿರ್ಮಾಣ ಹಂತದಲ್ಲಿರುವ ಶಾಲಾ ಕೊಠಡಿ ಬಳಿ ಆಟವಾಡುತ್ತಿದ್ದರು. ಈ ವೇಳೆ ಹಠಾತ್ ಗೋಡೆ ಕುಸಿದು ಮಕ್ಕಳ ಮೇಲೆ ಬಿದ್ದಿದ್ದು ಬಾಲಕ ವಿಸ್ತ್ರತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!