- Advertisement -
- Advertisement -
ಮೂಡುಬಿದಿರೆ: ಎಕ್ಸಾಮ್ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಬನ್ನಡ್ಕದಲ್ಲಿ ನಡೆದಿದೆ.
ಪಡುಮಾರ್ನಾಡು ಗ್ರಾಪಂ ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಮೃತಪಟ್ಟ ವಿದ್ಯಾರ್ಥಿ.
ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ ಹೊರಟಿದ್ದು ಬನ್ನಡ್ಕದಲ್ಲಿ ಬಸ್ಸಿನಿಂದಿಳಿದು ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಆದಿತ್ಯ ಹೆದ್ದಾರಿಯಿಂದ ಚರಂಡಿಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಕಾರಿನವರೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಧಿಕ ರಕ್ತಸ್ರಾವವಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -