



ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಪಟ್ಟಣದ ಹನುಮಂತಪುರ ಬಳಿಯಿರುವ SC, ST ಹಾಸ್ಟೆಲ್ ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಅಂಜನ್ ಕುಮಾರ್ (19) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಅಂಜನ್ ಕುಮಾರ್ ಮಧುಗಿರಿ ತಾಲೂಕಿನ ಕಸಬಾ ಹೋಬಳಿಯ ಮುದ್ದೇನಹಳ್ಳಿ ಗ್ರಾಮದವನು.ತುಮಕೂರು ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದನು. ಹಾಸ್ಟೆಲ್ ರೂಮಿನಲ್ಲಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋದು ಬೆಳಕಿಗೆ ಬಂದಿದೆ.
ಮಕರ ಸಂಕ್ರಾಂತಿ ಹಬ್ಬಕ್ಕೆ ರಜೆ ಹಿನ್ನೆಲೆ, ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳೆಲ್ಲರೂ ತಮ್ಮ ಊರಿಗೆ ತೆರಳಿದ್ದರು. ಕಳೆದ ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎನ್ ಇಪಿಎಸ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಹಾಸ್ಟೆಲ್ ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಓ ಪ್ರಭು ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಭೇಟಿ ನೀಡಿದ್ದಾರೆ. ಎನ್ ಇಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








