Saturday, June 13, 2026
spot_imgspot_img
spot_imgspot_img

ಬೆಳ್ತಂಗಡಿ : ಸೈಕಲ್ ಮಾರಾಟ ವಿಚಾರ ಸಂಬಂಧಿಸಿದಂತೆ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷನಿಂದ ವಿದ್ಯಾರ್ಥಿಯ ಮೇಲೆ ಹಲ್ಲೆ

- Advertisement -
- Advertisement -

ಬೆಳ್ತಂಗಡಿ : ಶಾಲಾ ಬಾಲಕನೊಬ್ಬ ಸೈಕಲ್ ಮಾರಾಟ ಮಾಡಿದ್ದಾನೆ ಎಂಬ ಆರೋಪದಡಿಯಲ್ಲಿ ಶಾಲಾ ಶಿಕ್ಷಕರ ಪ್ರೇರೇಪಣೆಯೊಂದಿಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಬಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.

ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬ ಸೈಕಲ್ ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಲಾ ಶಿಕ್ಷಕರ ಪ್ರೇರೇಪಣೆಯೊಂದಿಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಬಾಲಕನ ತಾಯಿಯ ಸಮಕ್ಷಮದಲ್ಲಿ
ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ.

ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೇ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಹಲ್ಲೆಯಿಂದ ಬಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 323,324,506,114 ಜೊತೆಗೆ 34 ಐಪಿಸಿ ಮತ್ತು ಕಲಂ:75 ಬಾಲನ್ಯಾಯ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!