Monday, June 30, 2025
spot_imgspot_img
spot_imgspot_img

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು..!

- Advertisement -
- Advertisement -

ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.

ಮೃತಪಟ್ಟ ಶಿಕ್ಷಕಿ ಚಳ್ಳಕೆರೆ ನಗರದ ವಿಠಲನಗರದ ನಿವಾಸಿ ಯಶೋದಮ್ಮ( 55) ಎಂದು ಗುರುತಿಸಲಾಗಿದೆ.

ಯಶೋದಮ್ಮ ಹೊಟ್ಲೆಪನಹಳ್ಳಿ 202 ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತರಾಗಿದ್ದರು. ಈ ಸಂದರ್ಭ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ದಾರಿ‌ ಮಧ್ಯದಲ್ಲಿ ಸಾವನಪ್ಪಿದ್ದಾರೆ. ಮೃತ ಶಿಕ್ಷಕಿ ಯಶೋಧ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಚುನಾವಣಾ ಕರ್ತವ್ಯ ನಿಮಿತ್ತ ಯಶೋದಮ್ಮ ಹೊಟ್ಲೆಪನಹಳ್ಳಿ ಮತಗಟ್ಟೆಗೆ ಬಂದಿದ್ದರು. ಸಹಾಯಕ ಪೋಲಿಂಗ್‌ ರಿಟರ್ನಿಂಗ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮತದಾನ ಆರಂಭವಾದಾಗ ಆರೋಗ್ಯವಾಗಿದ್ದ ಯಶೋದಮ್ಮ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಈ ಬಗ್ಗೆ ರಿಟರ್ನಿಂಗ್ ಆಫೀಸರ್ ಗಮನಕ್ಕೆ ತಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಆಸ್ಪತ್ರೆ ತಲುಪುವ ಮೊದಲೇ ಯಶೋದಮ್ಮ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ಪಡೆದ ಶಾಸಕ ಟಿ.ರಘುಮೂರ್ತಿ ಹಾಗೂ ಚುನಾವಣಾ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!