Friday, May 17, 2024
spot_imgspot_img
spot_imgspot_img

ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಮೃತ್ಯು

- Advertisement -G L Acharya panikkar
- Advertisement -

ಮಡಿಕೇರಿ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಪೊಕ್ಲು- ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ (19-ನವೀನ) ಮೃತ ದುರ್ದೈವಿ.

ಬೈಕಿನಲ್ಲಿದ್ದ ಇನ್ನೊಬ್ಬ ಸಹಪ್ರಯಾಣಿಕ ಗಂಭೀರ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ನಾಪೊಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!