Monday, June 30, 2025
spot_imgspot_img
spot_imgspot_img

ಉಡುಪಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ; 15 ಮಂದಿ ಗಂಭೀರ

- Advertisement -
- Advertisement -

ಉಡುಪಿ: ಖಾಸಗಿ ಎಕ್ಸ್‌ಪ್ರೆಸ್ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 15 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿಯ ಹೆಜಮಾಡಿ ಟೋಲ್ ಪ್ಲಾಜಾ ಬಳಿ ನಡೆದಿದೆ.

ಮೂಲಗಳ ಪ್ರಕಾರ ಲಾರಿ ಚಾಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡವನ್ನು ಗಮನಿಸಿದ್ದು, ಹಠಾತ್ ಬ್ರೇಕ್‌ ಹಾಕಿ ಲಾರಿಯನ್ನು ನಿಲ್ಲಿಸಿದ್ದಾನೆ. ಪರಿಣಾಮ ಹಿಂದಿನಿಂದ ಬರುತ್ತಿದ್ದ ಬಸ್ ಲಾರಿಗೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದೆ. ಬಸ್ಸಿನ ಚಾಲಕ ಹಾಗೂ ಬಸ್ಸಿನಲ್ಲಿದ್ದ ಸುಮಾರು 15 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!