Sunday, May 5, 2024
spot_imgspot_img
spot_imgspot_img

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ; ಮಗು ಸೇರಿ ಮೂವರು ಮೃತ್ಯು

- Advertisement -G L Acharya panikkar
- Advertisement -

ರಾಷ್ಟ್ರೀಯ ಹೆದ್ದಾರಿ 4ರ ವಿಜಾಪುರ ಗೇಟ್ ಬಳಿ ಫಾರ್ಚುನರ್ ಕಾರು ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಮೂರು ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಸಮೀಪ ನಡೆದಿದೆ.

ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್‌ನ ಜಾಕೀರ್ ಅಹಮ್ಮದ್(60), ತಬಸ್ಸುಮ್(28) ಹಾಗೂ ಮೂರು ವರ್ಷದ ಮಗು ಹಯಾತ್ ಫಾತಿಮಾ ಮೃತಪಟ್ಟವರು.

ಬೆಂಗಳೂರಿನ ಕುಟುಂಬವೊಂದು ಗೋವಾ ಪ್ರವಾಸ ಮುಗಿಸಿ ಬೆಂಗಳೂರಿಗೆ ಮರಳಿ ಬರುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿಯಾಗಿದ್ದು , ಕಾರಿನಲ್ಲಿದ್ದ 3 ತಿಂಗಳ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ 5 ಮಂದಿಗೆ ತೀವ್ರ ಗಾಯಗಳಾಗಿದ್ದು , ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.

- Advertisement -

Related news

error: Content is protected !!