Wednesday, May 15, 2024
spot_imgspot_img
spot_imgspot_img

ಲಾರಿಗೆ ಮತ್ತು ಜೀಪ್ ನಡುವೆ ಭೀಕರ ಅಪಘಾತ; ನಾಲ್ವರು ಮೃತ್ಯು..!

- Advertisement -G L Acharya panikkar
- Advertisement -

ಲಾರಿ ಹಾಗೂ ಜೀಪ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಫಜಲಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಲಾದ ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (05)ಮ ಎಂಧು ಗುರುತಿಸಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಪೂಜಾ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇವರು ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಜೀಪ್‌ನಲ್ಲಿ ಹೊರಟಿದ್ದರು. ಇತ್ತ ಕಲಬುರಗಿ ಕಡೆಯಿದ ಹೊರಟಿದ್ದ ಲಾರಿಗೆ ಈ ಜೀಪ್ ಡಿಕ್ಕಿ ಹೊಡೆದಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!