Saturday, June 6, 2026
spot_imgspot_img
spot_imgspot_img

ಪಿಕಪ್ – ಆಟೋ ನಡುವೆ ಭೀಕರ ಅಪಘಾತ| ಆಟೋ ಚಾಲಕ ಗಂಭೀರ

- Advertisement -
- Advertisement -

ಪಿಕಪ್ ವಾಹನ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕನೋರ್ವ ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರ ಗಾಯಗಳಾಗಿದ್ದ ಆಟೋ ಚಾಲಕ ಸುನೀಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಅಪಘಾತ ಸಂಭವಿಸಿದ್ದು, ತಕ್ಷಣವೇ ಪಿಕಪ್ ವಾಹನದ ಚಾಲಕ ಗಾಳಿಬೀಡಿನ ಮೋಕ್ಷಿತ್ ಎಂಬಾತನನ್ನು ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಮೆಜಾನ್ ನಲ್ಲಿ ವ್ಯಾಪಾರ ಮಾಡುತ್ತಿರುವ ಮೋಕ್ಷಿತ್ ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ.

- Advertisement -

Related news

error: Content is protected !!