Saturday, June 13, 2026
spot_imgspot_img
spot_imgspot_img

ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಭೀಕರ ಅಪಘಾತ; ಇಬ್ಬರು ಮೃತ್ಯು

- Advertisement -
- Advertisement -

ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಅಪಘಾತ ಸಂಭವಿಸಿ ಓಮಿನಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ ಮರಳೂರು ಕೆರೆ ಏರಿ ಬಳಿ ನಡೆದಿದೆ.

ಖಾಸಗಿ ಬಸ್​ನಲ್ಲಿದ್ದ 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಖಾಸಗಿ ಬಸ್ ಬರುತ್ತಿತ್ತು. ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ಓಮಿನಿ ಕಾರು ತೆರಳುತ್ತಿತ್ತು. ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!