Friday, July 31, 2026
spot_imgspot_img
spot_imgspot_img

ಪುತ್ತೂರು : ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ : ಇಬ್ಬರು ಸಾವು!

- Advertisement -
- Advertisement -

ಪುತ್ತೂರು : ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ.
ಆಲ್ಟೊ ಮತ್ತು ಬೋಲೆರೋ ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಲ್ಲೊ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಸೋಮವಾರಪೇಟೆ ಮೂಲದ ಲೋಕೇಶ್, ರವೀಂದ್ರ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಬೋಲೆರೋ ವಾಹನದಲ್ಲಿದ್ದವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನಿಂದ ಮಡಿಕೇರಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಪುತ್ತೂರು ನಗರ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!