Friday, May 17, 2024
spot_imgspot_img
spot_imgspot_img

ಮಿನಿ ಬಸ್ ಮತ್ತು ಕಂಟೈನರ್ ಗೆ ನಡುವೆ ನಡೆದ ಭೀಕರ ಅಪಘಾತ; 12 ಮಂದಿ ಮೃತ್ಯು

- Advertisement -G L Acharya panikkar
- Advertisement -

ಮಿನಿ ಬಸ್ ಮತ್ತು ಕಂಟೈನರ್ ಗೆ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 23ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ ಎಕ್ಸ್‌ಪ್ರೆಸ್‌ವೇಯ ವೈಜಾಪುರ ಪ್ರದೇಶದಲ್ಲಿ 12.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಮಿನಿಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಹಿಂಬದಿಯಿಂದ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹನ್ನೆರಡು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಪುರುಷರು, ಆರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತ ಬಾಲಕಿ ಸೇರಿದ್ದಾರೆ. 23 ಮಂದಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!