Saturday, June 28, 2025
spot_imgspot_img
spot_imgspot_img

ಭೀಕರ ಕಾರು ಅಪಘಾತ; ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು..!

- Advertisement -
- Advertisement -

ಭೀಕರ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ‌ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಪ್ರಾಣಾಪಾಯದಿಂದ‌ ಪಾರಾಗಿದ್ದಾನೆ.

ಅಪಘಾತದಲ್ಲಿ ಮೃತಪಟ್ಟವರನ್ನು ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35), ಬೆಸ್ಕಾಂ ಲೈನ್​ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಗಿದೆ. ಶಿವಕುಮಾರ್‍ ಎಂಬವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ರಾತ್ರಿ ಗೌರಿಬಿದನೂರು ತಾಲೂಕಿನ ನಗರಗೆರೆ-ವಾಟದಹೊಸಹಳ್ಳಿ ರಸ್ತೆಯಲ್ಲಿ ವೇಣುಗೋಪಾಲ್ ಅವರು ಕಾರಿನಲ್ಲಿ ಬರುವಾಗ ಕಾರು ಆಯತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿಲಾಗಿದೆ ಎಂದು ತಿಳಿದು ಬಂದಿದೆ.

ಘಟನಾಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

- Advertisement -

Related news

error: Content is protected !!