Monday, April 29, 2024
spot_imgspot_img
spot_imgspot_img

ಸುಳ್ಯ: ನಗರ ಪಂಚಾಯತ್ ಸಿಬ್ಬಂದಿ ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಂಡೆಂಟ್ ಪತ್ತೆ; ಅರಣ್ಯಾಧಿಕಾರಿಗಳಿಂದ ತನಿಖೆ..!!

- Advertisement -G L Acharya panikkar
- Advertisement -
vtv vitla

ಸುಳ್ಯ: ನಗರ ಪಂಚಾಯತ್ ಸಿಬ್ಬಂದಿಯೊಬ್ಬರು ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿರುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಅರಣ್ಯ ಅಧಿಕಾರಿಗಳು ಮಾಹಿತಿ ಪಡೆದುಕೊಂಡು ಪೆಂಡೆಂಟ್ ವಶಕ್ಕೆ ಪಡೆದುಕೊಂಡಿದ್ದಾರೆ.

ಸುಳ್ಯ ನಗರ ಪಂಚಾಯತ್ ಸಿಬ್ಬಂದಿಯ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗುತ್ತಿದ್ದು, ಅರಣ್ಯಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ವಲಯ ಅರಣ್ಯಾಧಿಕಾರಿ ಪ್ರವೀಣ್ ಶೆಟ್ಟಿ “ಫೋಟೋ ವೈರಲ್ ಆಗುತ್ತಿದ್ದಂತೆ ಸತ್ಯಾಸತ್ಯತೆ ತಿಳಿಯುವ ಉದ್ದೇಶದಿಂದ ನಾವು ಅವರನ್ನು ನಮ್ಮ ಕಚೇರಿಗೆ ಕರೆಸಿ ಪೆಂಡೆಂಟ್ ವಶಕ್ಕೆ ಪಡೆದಿದ್ದೇವೆ. ಮೇಲ್ನೋಟಕ್ಕೆ ಇದು ಹುಲಿ ಉಗುರು ತರಹ ಕಂಡುಬರುತ್ತಿಲ್ಲ. ಬದಲಾಗಿ ಇದು ಹುಲಿಯ ಹಲ್ಲಿನ ತರಹ ಇದೆ ಎಂದಿದ್ದಾರೆ.

ಮಹಿಳೆ ಹೇಳುವ ಪ್ರಕಾರ ತನ್ನ ತಾಯಿಯು ಹಲವು ವರ್ಷಗಳ ಹಿಂದೆ ತಮಗೆ ನೀಡಿದ್ದಾಗಿ ಹೇಳುತ್ತಿದ್ದಾರೆ. ನಾವು ಪರೀಕ್ಷೆಗಾಗಿ ಲ್ಯಾಬ್ ಟೆಸ್ಟ್‌ಗೆ ಕಳುಹಿಸುತ್ತೇವೆ. ಒಂದು ವೇಳೆ ಇದು ಒರಿಜಿನಲ್ ಆಗಿದ್ದಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಅರಣ್ಯಾಧಿಕಾರಿ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.

- Advertisement -

Related news

error: Content is protected !!