Saturday, June 28, 2025
spot_imgspot_img
spot_imgspot_img

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಬೈಕ್ ಸವಾರ ಸ್ಥಳದಲ್ಲೇ ಸಾವು..!

- Advertisement -
- Advertisement -

ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವಕ ರಾಮಪ್ಪ (26) ಎಂದು ಗುರುತಿಸಲಾಗಿದೆ.

ಕೋಣಂದೂರಿಗೆ ಕೆಲಸದ ನಿಮಿತ್ತ ರಾಮಪ್ಪ ತೆರಳಿದ್ದರು. ವಾಪಾಸ್ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಚಲಿಸುತ್ತಿರುವಾಗಲೇ ಬೈಕ್ ಮೇಲೆ ಆಕೇಶಿಯ ಮರವೊಂದು ಅಪ್ಪಳಿಸಿದೆ. ಇದರಿಂದ ಸ್ಥಳದಲ್ಲೇ ಅಸುನೀಗಿದ್ದಾರೆ. ರಾಮಪ್ಪ ಸಕಾಲಕ್ಕೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರಿ 12.30 ಸುಮಾರಿಗೆ ಸ್ಥಳಕ್ಕೆ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಧುರಾಜ ಹೆಗ್ಡೆ ಭೇಟಿ ನೀಡಿದ್ದರು. ಈ ಹಿಂದೆ ದೇಮ್ಲಾಪುರ ಸಮೀಪ ಬೈಕ್ ಮೇಲೆ ಮರಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಡೆದಿತ್ತು.

- Advertisement -

Related news

error: Content is protected !!