Monday, June 15, 2026
spot_imgspot_img
spot_imgspot_img

ರಸ್ತೆ ಪಕ್ಕ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; 5 ಸಾವು, ಐವರು ಗಂಭೀರ

- Advertisement -
- Advertisement -
vtv vitla

ಸೇಬು ಸಾಗಿಸುತ್ತಿದ್ದ ಟ್ರಕ್‌ ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಪರಿಣಾಮ 5 ಕಾರ್ಮಿಕರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಹಾರಾಷ್ಟ್ರದ ಬುಲ್ಡಾನಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಕಾರ್ಮಿಕರು ರಸ್ತೆ ರಿಪೇರಿ ಕೆಲಸಕ್ಕೆ ಬಂದು ಅಲ್ಲೇ ತಾತ್ಕಾಲಿಕ ಶೆಡ್‌ ನಿರ್ಮಿಸಿ ವಾಸಿಸುತ್ತಿದ್ದರು. ಟ್ರಕ್‌ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಮಿಕರ ಮೇಲೆ ಹರಿದಿದ್ದು, ಅಪಘಾತದ ಬಳಿಕ ಟ್ರಕ್‌ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಜಿಲ್ಲೆಯ ವಡ್ನರ್ ಭೋಲ್ಜಿ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಸರ್ವಿಸ್ ರಸ್ತೆಯ ಬದಿಯಲ್ಲಿ ತಾತ್ಕಾಲಿಕ ಗುಡಿಸಲುಗಳಲ್ಲಿ ಕಾರ್ಮಿಕರು ಮಲಗಿದ್ದಾಗ ಬೆಳಿಗ್ಗೆ 5.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

- Advertisement -

Related news

error: Content is protected !!