Monday, May 6, 2024
spot_imgspot_img
spot_imgspot_img

ಪುತ್ತೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಮೃತ್ಯು

- Advertisement -G L Acharya panikkar
- Advertisement -

ಪುತ್ತೂರು: ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಇಂದು ಮಧ್ಯಾಹ್ನ ಮುರದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ.

ಇನ್ನೊರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಲ್ಲಿ ಡಿಯೋವನ್ನು ಚಲಾಯಿಸುತ್ತಿದವರು ಯಾರು ಎಂಬ ಮಾಹಿತಿ ತಿಳಿದುಬಂದಿಲ್ಲ.
ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಮುರದಲ್ಲಿ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಪುತ್ತೂರಿನಿಂದ ಕಬಕ ಕಡೆ ತೆರಳುತ್ತಿದ್ದ ಡಿಯೋ ಹಾಗೂ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!