Sunday, June 21, 2026
spot_imgspot_img
spot_imgspot_img

ಮಲಗಿದ್ದವರ ಮೇಲೆ ಹರಿದ ವಾಹನ; ಓರ್ವ ಮೃತ್ಯು, ಮತ್ತೋರ್ವ ಗಂಭೀರ..!

- Advertisement -
- Advertisement -

ಮಲಗಿದ್ದವರ ಮೇಲೆ ಬೊಲೆರೋ ವಾಹನ ಹರಿದ ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನ ನೆಂಟಕುಂಟಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿ ಆರೀಫುಲ್ಲಾ ಹಾಗೂ ಗಂಭೀರ ಗಾಯಗೊಂಡವರ್‍ನು ನರಸಿಂಹಪ್ಪ ಎಂದು ಗುರುತಿಸಲಾಗಿದೆ.

ಆರೀಫುಲ್ಲಾ ಮತ್ತು ನರಸಿಂಹಪ್ಪ ಹಸು ಕರು ಹಾಕುತ್ತದೆ ಎಂದು ರಸ್ತೆ ಬದಿಯಲ್ಲಿ ಕಾದು ಕುಳಿತಿದ್ದರು. ಈ ವೇಳೆ ಹಾಗೇ ನಿದ್ದೆಗೆ ಜಾರಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಬಂದ ಚಾಲಕ ಏಕಾಏಕಿ ಮಲಗಿದ್ದವರ ಮೇಲೆ ಹತ್ತಿಸಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ಆರೀಫುಲ್ಲಾ ಮೃತಪಟ್ಟರೆ, ನರಸಿಂಹಪ್ಪ ಕಾಲು ಮುರಿದು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ನರಸಿಂಹಪ್ಪನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಲಕ ಗಂಗರಾಜು ಬುಲೆರೋ ವಾಹನ ಬಿಟ್ಟು ಪರಾರಿ ಆಗಿದ್ದಾನೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಾಗಿದ್ದು, ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

- Advertisement -

Related news

error: Content is protected !!