Sunday, August 23, 2026
spot_imgspot_img
spot_imgspot_img

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ವಿಹರಿಸಿದ ಕಾಡಾನೆ ..!

- Advertisement -
- Advertisement -

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಮತ್ತೆ ಕಾಡಾನೆ ಕಂಡು ಬಂದಿದೆ. ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪ ನದಿಯಲ್ಲಿ ವಿಹರಿಸುತ್ತಿರುವುದು ಪತ್ತೆಯಾಗಿದೆ.

ನೇತ್ರಾವತಿ ನದಿಯಲ್ಲಿ ತಿರುಗಾಡುತ್ತಿರುವ ಆನೆಯ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದ್ದಾರೆ.ಈ ಆನೆ ಕೊಯ್ಯೂರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿಗೆ ಬಂದು ಕರಂಬಾರು ಸುದೆಪಿಲ ಸಮೀಪ ನೇತ್ರಾವತಿಯಲ್ಲಿ ಸ್ನಾನ ಮಾಡಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಂಚಾರಿಸಿದೆ.

ಮತ್ತೆ ಎಲ್ಲಿ ಈ ಒಂಟಿ ಸಲಗ ಪ್ರತ್ಯಕ್ಷವಾಗಿ ತೊಂದರೆ ಕೊಡಲಿದೆಯೋ ಎಂಬ ಆತಂಕ ಜನತೆಯಲ್ಲಿದೆ. ಆನೆಯನ್ನು ಕಾಡಿಗಟ್ಟಲು ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭವಾಗಿದೆ.

- Advertisement -

Related news

error: Content is protected !!