Saturday, May 18, 2024
spot_imgspot_img
spot_imgspot_img

ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಮೃತ್ಯು

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರತ್ಮಮ್ಮ ಸಿಡಿಲಿಗೆ ಬಲಿಯಾದ ಮಹಿಳೆ . ಮಧ್ಯಾಹ್ನ ದಿಢೀರ್ ಮಳೆ ಆರಂಭವಾಗಿದ್ದು, ಮಹಿಳೆ ಬೇವಿನ ಮರದಡಿ ಮೇಕೆಗಳ ಜೊತೆ ನಿಂತಿದ್ದಾಗ ಸಿಡಿಲು ಬಡಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಮೇಕೆಗಳು ಸಹ ಸಿಡಿಲಿಗೆ ಬಲಿಯಾಗಿವೆ. ಗ್ರಾಮದಲ್ಲಿ ಗಾಳಿ ಮಳೆಯ ಆರ್ಭಟ ಜೋರಾಗಿದ್ದು ಮಳೆ ಮುಂದುವರೆದಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!