Thursday, May 2, 2024
spot_imgspot_img
spot_imgspot_img

ಶೌಚಾಲಯದಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಮಕ್ಕಳಾಗಿಲ್ಲ ಎಂದು ಗಂಡನ ಮನೆಯವರು ನೀಡುತ್ತಿದ್ದ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ಮನನೊಂದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಆಶಾ (26) ಎಂದು ಗುರುತಿಸಲಾಗಿದೆ.

ಬೇಕೆರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ 5 ವರ್ಷ ಹಿಂದೆ ಮದುವೆಯಾಗಿತ್ತು. ಆದರೆ ಮಕ್ಕಳಾಗಿರಲಿಲ್ಲ. ಹೀಗಾಗಿ ಆಶಾಳಿಗೆ ಪ್ರತಿನಿತ್ಯ ಆಕೆಯ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು. ಅಷ್ಟೇ ಅಲ್ಲದೇ ಆಕೆಯ ಅತ್ತೆ ಆಶಾಗೆ ತವರು ಮನೆಗೆ ವಾಪಸ್ ಕಳುಹಿಸುತ್ತೇನೆ ಎಂದು ಹಿಂಸೆ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಹೀಗಾಗಿ ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಆಶಾ ಇಂದು ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಶ್ರೀರಾಮಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!