Friday, June 19, 2026
spot_imgspot_img
spot_imgspot_img

ರಸ್ತೆ ದಾಟುತ್ತಿದ್ದ ಮಹಿಳೆಗೆ ಸರ್ಕಾರಿ ಬಸ್ಸು ಡಿಕ್ಕಿ

- Advertisement -
- Advertisement -

ರಸ್ತೆ ದಾಟುತ್ತಿದ್ದ ಮಹಿಳೆಗೆ ಸರ್ಕಾರಿ ಬಸ್ಸು ಡಿಕ್ಕಿ ಹೊಡೆದು ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಭದ್ರಾವತಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.

ಗಾಯಗೊಂಡ ಮಹಿಳೆಯನ್ನು ಭದ್ರಾವತಿ ಪಟ್ಟಣದ ನಿವಾಸಿ ಚಂದ್ರಾಬಾಯಿ ಎಂದು ಗುರುತಿಸಲಾಗಿದೆ.

ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿದು ಬಂದಿದೆ.
ವೀಡಿಯೊದಲ್ಲಿ ಮಹಿಳೆ ರಸ್ತೆ ದಾಟುತ್ತಿರುವ ವೇಳೆ ಬಸ್ ನಿಲ್ದಾಣಕ್ಕೆ ತಿರುವು ಪಡೆದ ಚಾಲಕ ಎದುರಿಗೆ ಹೋಗುತ್ತಿದ್ದ ಮಹಿಳೆಯನ್ನು ಗಮನಿಸದೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.
ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಬಿದ್ದ ಮಹಿಳೆಯ ಕಾಲಿನ ಮೇಲೆ ಬಸ್ಸಿನ ಚಕ್ರ ಹರಿದು ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!