Thursday, May 9, 2024
spot_imgspot_img
spot_imgspot_img

ಮರದ ಕೊಂಬೆ ಬಿದ್ದು ಮಹಿಳೆ ಮೃತ್ಯು..!

- Advertisement -G L Acharya panikkar
- Advertisement -

ಮರದ ಕೊಂಬೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ತೋಟವೊಂದರಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ತೋಟದ ಲೈನ್ ಮನೆಯಲ್ಲಿ ವಾಸವಾಗಿರುವ ಕಾರ್ಮಿಕ ಬಪ್ಪಯ್ಯ ಅವರ ಪತ್ನಿ ಲಕ್ಷ್ಮೀ (48)) ಎಂದು ಗುರುತಿಸಲಾಗಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಮರದ ಕೊಂಬೆ ತಲೆಯ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ ಅವರನ್ನು ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಿ. ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಲಕ್ಷ್ಮೀ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!