Friday, June 27, 2025
spot_imgspot_img
spot_imgspot_img

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಮಹಿಳೆ ಮೃತ್ಯು..!

- Advertisement -
- Advertisement -

ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏರ್‌ಪೋರ್ಟ್‌ ಉದ್ಯೋಗಿಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾದ ಏರ್‌ಪೋರ್ಟ್‌ ರಸ್ತೆಯಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಹುಬ್ಬಳ್ಳಿ ಮೂಲದ ಕಾಜೋಲ್‌ ಶಿಯಾನಿ ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಐವರು ಉದ್ಯೋಗಿಗಳು ಪ್ರಯಾಣಿಸುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾಜೋಲ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದಂತೆ ಕಾರಿನಲ್ಲಿದ್ದ ಉಳಿದ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರಲ್ಲಿ ಒಬ್ಬರನ್ನು ರೀತು ಪಾಟೀಲ್‌ ಎಂದು ಗುರುತಿಸಲಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!