Monday, June 15, 2026
spot_imgspot_img
spot_imgspot_img

ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು

- Advertisement -
- Advertisement -

ಒಬ್ಬಂಟಿಯಾಗಿ ವಾಸವಾಗಿದ್ದ ವೃದ್ಧೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ಫೋಸ್ಟ್ ಆಫೀಸ್ ಸಮೀಪದ ಮನೆಯಲ್ಲಿ ನಡೆದಿದೆ.

ಕಮಲ (82) ಕೊಲೆಯಾದ ವೃದ್ಧೆ, ದುಷ್ಕರ್ಮಿಗಳು ವೃದ್ಧೆಯ ಕೈ ಕಾಲನ್ನು ಕಟ್ಟಿಹಾಕಿ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ವೃದ್ಧೆಯನ್ನು ಕೊಲೆ ಮಾಡಿರುವುದು ಯಾರು? ಆಕೆಯನ್ನು ಯಾಕಾಗಿ ಕೊಲೆ ಮಾಡಿದ್ದಾರೆ ಎಂದು ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

- Advertisement -

Related news

error: Content is protected !!